ಕೊಡಗು ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಆನೆಕಾಡು ಅರಣ್ಯ ಪ್ರದೇಶದ ಬಳಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆಯ ಸಹ ಕಲಾವಿದ ಹರೀಶ್ (40) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ತಮ್ಮ ಕಾರಿನಲ್ಲಿ ಸ್ವಗ್ರಾಮ ಹೊಸಕೋಟೆಗೆ ತೆರಳುತ್ತಿದ್ದ ವೇಳೆ, ರಸ್ತೆ ಬದಿಯಲ್ಲಿ ನಿಂತಿದ್ದ ಟ್ಯಾಂಕರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ನಡೆದಿದೆ. ಮೃತ ಹರೀಶ್ ಅವರು ಬಹುಮುಖಿ ಪ್ರತಿಭೆಯಾಗಿದ್ದರು. ಅವರು ವೃತ್ತಿಜೀವನದ ಜೊತೆಗೇ ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಮತ್ತು ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ನಟಿಸುವ ಮೂಲಕ ತಮ್ಮನ್ನು ಗುರುತಿಸಿಕೊಂಡಿದ್ದರು.
ರಭಸದಿಂದ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು, ಹರೀಶ್ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಈ ಘಟನೆ ರಾಷ್ಟ್ರೀಯ ಹೆದ್ದಾರಿ 275 ರ ಆನೆಕಾಡು ಸಮೀಪದಲ್ಲಿ ನಡೆದಿದೆ.
ಹರೀಶ್ ಅವರು ಬಹುಮುಖಿ ಪ್ರತಿಭಾವಂತರಾಗಿದ್ದು, ಹಲವು ಕನ್ನಡ ಸಿನಿಮಾಗಳಲ್ಲಿ ಸಹ ಕಲಾವಿದನಾಗಿ ಕಾಣಿಸಿಕೊಂಡಿದ್ದರು. ಜೊತೆಗೆ ಜನಪ್ರಿಯ ಧಾರಾವಾಹಿಗಳಲ್ಲಿಯೂ ತಮ್ಮ ಅಭಿನಯದ ಮೂಲಕ ಪ್ರೇಕ್ಷಕರ ಮನಗೆದ್ದಿದ್ದರು.
ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆಯೇ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.