ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ !!ಇಂದೇ ಅರ್ಜಿ ಸಲ್ಲಿಸಿ

ಪಿಎಂ ವಿದ್ಯಾಲಕ್ಷ್ಮಿ ಸಾಲ ಯೋಜನೆ – ವಿದ್ಯಾರ್ಥಿಗಳಿಗೆ ಸುವರ್ಣಾವಕಾಶ   !! ನಮಸ್ಕಾರ ಸ್ನೇಹಿತರೆ, ಕೇಂದ್ರ ಸರ್ಕಾರದಿಂದ ವಿದ್ಯಾರ್ಥಿಗಳಿಗೆ ಮತ್ತೊಂದು ಸಂತಸದ ಸುದ್ದಿ ಬಂದಿದೆ. ಉನ್ನತ ಶಿಕ್ಷಣ ಪಡೆಯಲು ಬೇಕಾಗುವ ಖರ್ಚು ವೆಚ್ಚವನ್ನು ಪೂರೈಸಲು ಪಿಎಂ ವಿದ್ಯಾಲಕ್ಷ್ಮಿ ಯೋಜನೆ ಅಡಿಯಲ್ಲಿ ವಿದ್ಯಾರ್ಥಿಗಳಿಗೆ ಬರೋಬ್ಬರಿ 10 ಲಕ್ಷ ರೂಪಾಯಿವರೆಗೆ ಯಾವುದೇ ಗ್ಯಾರೆಂಟಿ ಇಲ್ಲದೆ ಸಾಲ ಸೌಲಭ್ಯ ನೀಡಲಾಗುತ್ತಿದೆ.ಉನ್ನತ ಶಿಕ್ಷಣ ಪಡೆಯಲು ಬಯಸುವ ವಿದ್ಯಾರ್ಥಿಗಳು ಹಾಗೂ ತಮ್ಮ ಭವಿಷ್ಯವನ್ನು ಶಿಕ್ಷಣದ ಮೂಲಕ ರೂಪಿಸಿಕೊಳ್ಳಲು ಬಯಸುವವರಿಗೆ ಇದು ಮಹತ್ವದ ಅವಕಾಶ. ಕೇಂದ್ರ ಸರ್ಕಾರವು ಯಾವುದೇ ಖಾತರಿ ಇಲ್ಲದೆ ಹತ್ತು ಲಕ್ಷದವರೆಗೆ ಸಾಲ ಸೌಲಭ್ಯ ಒದಗಿಸುತ್ತಿದ್ದು, ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ದೇಶೀಯ ಹಾಗೂ ವಿದೇಶಿ ಶಿಕ್ಷಣ ಸಂಸ್ಥೆಗಳಲ್ಲಿ ಉನ್ನತ ಶಿಕ್ಷಣ ಪಡೆಯಬಹುದು.

ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ !!ಇಂದೇ ಅರ್ಜಿ ಸಲ್ಲಿಸಿ
ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕಾಗಿ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ !!ಇಂದೇ ಅರ್ಜಿ ಸಲ್ಲಿಸಿ

ಏನಿದು ಪಿಎಂ ವಿದ್ಯಾಲಕ್ಷ್ಮಿ ಯೋಜನೆ?

ರಾಷ್ಟ್ರೀಯ ಶಿಕ್ಷಣ ನೀತಿ 2026ರ ಭಾಗವಾಗಿ ಉನ್ನತ ಶಿಕ್ಷಣ ಸಚಿವಾಲಯದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಇದರ ಮುಖ್ಯ ಉದ್ದೇಶವೇನೆಂದರೆ, ದೇಶದ ಯುವಕರು ಹಣದ ಕೊರತೆಯಿಂದ ಗುಣಮಟ್ಟದ ಶಿಕ್ಷಣದಿಂದ ವಂಚಿತರಾಗಬಾರದು.

ಈ ಯೋಜನೆಯಡಿ ಅರ್ಹ ವಿದ್ಯಾರ್ಥಿಗಳಿಗೆ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯವನ್ನು ಸಂಪೂರ್ಣ ಡಿಜಿಟಲ್ ವ್ಯವಸ್ಥೆಯ ಮೂಲಕ ನೀಡಲಾಗುತ್ತದೆ. ಪಾರದರ್ಶಕತೆ ಮತ್ತು ಸರಳತೆಯನ್ನು ಕಾಪಾಡುವ ಉದ್ದೇಶದಿಂದ ಈ ಯೋಜನೆ ರೂಪಿಸಲಾಗಿದೆ.

ಯೋಜನೆಯ ಉಪಯೋಗಗಳು

ಯಾವುದೇ ಗ್ಯಾರೆಂಟಿ ಇಲ್ಲದೆ 10 ಲಕ್ಷ ರೂಪಾಯಿವರೆಗೆ ಸಾಲ ಸೌಲಭ್ಯ.

ಬೋಧನೆ ಶುಲ್ಕ, ಪುಸ್ತಕಗಳು ಮತ್ತು ಇತರೆ ಶೈಕ್ಷಣಿಕ ವೆಚ್ಚಗಳಿಗೆ ನೇರವಾಗಿ ಬ್ಯಾಂಕ್ ಮೂಲಕ ಹಣ.

ಸಾಲ ಪಡೆಯಲು ಆಸ್ತಿ ಅಥವಾ ಇತರೆ ವಸ್ತುಗಳನ್ನು ಅಡವಿಡುವ ಅವಶ್ಯಕತೆ ಇಲ್ಲ.

ಕುಟುಂಬದ ವಾರ್ಷಿಕ ಆದಾಯ 8 ಲಕ್ಷ ರೂಪಾಯಿಗಿಂತ ಕಡಿಮೆ ಇದ್ದರೆ 3% ಬಡ್ಡಿ ರಿಯಾಯಿತಿ.

ವಾರ್ಷಿಕ ಆದಾಯ 4.5 ಲಕ್ಷ ರೂಪಾಯಿಗಿಂತ ಕಡಿಮೆ ಇದ್ದರೆ ಸಂಪೂರ್ಣ ಬಡ್ಡಿ ಮನ್ನಾ ಸೌಲಭ್ಯ.

ಅರ್ಜಿ ಸಲ್ಲಿಸುವ ವಿಧಾನ

ವಿದ್ಯಾರ್ಥಿಗಳು ಈ ಯೋಜನೆಗೆ ಅರ್ಜಿ ಸಲ್ಲಿಸಲು ಮೊದಲು ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಬೇಕು. ಅಲ್ಲಿ ಪಿಎಂ ವಿದ್ಯಾಲಕ್ಷ್ಮಿ ಯೋಜನೆಯ ಬಗ್ಗೆ ಹೆಚ್ಚಿನ ಮಾಹಿತಿಯನ್ನು ತಿಳಿದುಕೊಂಡು, ನೋಂದಣಿ ಮಾಡಿ ಅರ್ಜಿ ಸಲ್ಲಿಸಬಹುದು.

???? ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ