ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹೊಸ ನಿಯಮ: ಈ ಕೆಲಸ ಮಾಡದ್ದಿದರೆ ಇನ್ಮುಂದೆ ನಿಮಗ ಹಣ ಸಿಗುವುದಿಲ್ಲ ?

ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ ಸಂಬಂಧಿಸಿದಂತೆ ಹೊಸ ನಿಯಮ ಜಾರಿಗೆ ಬರಲಿದೆ. ಯೋಜನೆಯ ಹಣ ದುರ್ಬಳಕೆಯಾಗದಂತೆ ಹಾಗೂ ಅರ್ಹ ಫಲಾನುಭವಿಗಳಿಗೆ ಮಾತ್ರ ತಲುಪುವಂತೆ ಮಾಡಲು, ಇನ್ಮುಂದೆ ಮಹಿಳೆಯರು ಪ್ರತಿ ವರ್ಷ ಕಡ್ಡಾಯವಾಗಿ ‘ಜೀವಿತ ಪ್ರಮಾಣ ಪತ್ರ’ (Life Certificate) ಸಲ್ಲಿಸಬೇಕಾಗುವ ಸಾಧ್ಯತೆ ಇದೆ.

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹೊಸ ನಿಯಮ: ಈ ಕೆಲಸ ಮಾಡದ್ದಿದರೆ ಇನ್ಮುಂದೆ ನಿಮಗ ಹಣ ಸಿಗುವುದಿಲ್ಲ ?
ಗೃಹಲಕ್ಷ್ಮಿ ಫಲಾನುಭವಿಗಳಿಗೆ ಹೊಸ ನಿಯಮ: ಈ ಕೆಲಸ ಮಾಡದ್ದಿದರೆ ಇನ್ಮುಂದೆ ನಿಮಗ ಹಣ ಸಿಗುವುದಿಲ್ಲ ?

ಪ್ರಸ್ತುತ ರಾಜ್ಯದಲ್ಲಿ ಸುಮಾರು 1.24 ಕೋಟಿಗೂ ಹೆಚ್ಚು ಮಹಿಳೆಯರು ಪ್ರತಿ ತಿಂಗಳು ₹2,000 ಗೃಹಲಕ್ಷ್ಮಿ ನೆರವನ್ನು ಪಡೆಯುತ್ತಿದ್ದಾರೆ. ಈವರೆಗೆ ಸರ್ಕಾರವು ಒಟ್ಟು ₹57,300 ಕೋಟಿಗೂ ಅಧಿಕ ಮೊತ್ತವನ್ನು ಹಂಚಿಕೆ ಮಾಡಿದೆ. ಆದರೆ ಇತ್ತೀಚಿನ ವರದಿಗಳ ಪ್ರಕಾರ, ಕೆಲ ಫಲಾನುಭವಿಗಳು ಮರಣ ಹೊಂದಿದ್ದರೂ ಅವರ ಖಾತೆಗಳಿಗೆ ಹಣ ಜಮೆಯಾಗುತ್ತಿರುವುದು ಬೆಳಕಿಗೆ ಬಂದಿದೆ. ಇದರಿಂದ ಕೋಟ್ಯಂತರ ರೂಪಾಯಿ ಸರ್ಕಾರದ ಬೊಕ್ಕಸದಿಂದ ವ್ಯರ್ಥವಾಗುತ್ತಿದೆ.

ಈ ವಿಷಯವನ್ನು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ. “ಮೃತಪಟ್ಟವರ ಖಾತೆಗೆ ಹಣ ಹೋಗುವುದನ್ನು ತಡೆದರೆ, ಆ ಉಳಿತಾಯವನ್ನು ಇನ್ನಷ್ಟು ಅರ್ಹ ಫಲಾನುಭವಿಗಳಿಗೆ ತಲುಪಿಸಬಹುದು ಅಥವಾ ಇತರ ಅಭಿವೃದ್ಧಿ ಕಾರ್ಯಗಳಿಗೆ ಬಳಸಬಹುದು” ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪತ್ರವನ್ನು ಗಂಭೀರವಾಗಿ ಪರಿಗಣಿಸಿ, 07/02/2026 ರಂದು ಮುಖ್ಯ ಕಾರ್ಯದರ್ಶಿಗೆ ಲಿಖಿತ ಆದೇಶ ನೀಡಿದ್ದಾರೆ. ನಿವೃತ್ತ ಸರ್ಕಾರಿ ನೌಕರರು ಪಿಂಚಣಿ ಪಡೆಯಲು ನೀಡುವ ‘ಲೈಫ್ ಸರ್ಟಿಫಿಕೇಟ್’ ಮಾದರಿಯನ್ನೇ ಗೃಹಲಕ್ಷ್ಮಿ ಯೋಜನೆಗೂ ಅನ್ವಯಿಸುವಂತೆ ಸೂಚನೆ ನೀಡಿದ್ದಾರೆ. ಇದರಿಂದ ಅರ್ಹ ಮಹಿಳೆಯರಿಗೆ ಮಾತ್ರ ನೆರವು ತಲುಪುವಂತಾಗುತ್ತದೆ.

ಗೃಹಲಕ್ಷ್ಮಿ ಹಣಕ್ಕಾಗಿ ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಕೇಂದ್ರಗಳಿಗೆ ಹೋಗುವಾಗ, ನಿಮ್ಮ ಆಧಾರ್ ಕಾರ್ಡ್‌ಗೆ ಲಿಂಕ್ ಆಗಿರುವ ಮೊಬೈಲ್ ಫೋನ್ ಕಡ್ಡಾಯವಾಗಿ ಕೊಂಡೊಯ್ಯಬೇಕು. ಒಂದು ವೇಳೆ ಹೆಬ್ಬೆಟ್ಟು (Biometric) ಸರಿಯಾಗಿ ಮ್ಯಾಚ್ ಆಗದಿದ್ದರೆ, ಮೊಬೈಲ್ ಒಟಿಪಿ (OTP) ಮೂಲಕ ಲೈಫ್ ಸರ್ಟಿಫಿಕೇಟ್ ಅಪ್‌ಡೇಟ್ ಮಾಡಲು ಅವಕಾಶ ಕಲ್ಪಿಸಲಾಗುತ್ತದೆ